This is the title of the web page

ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಕೊಲೆ ಬೆದರಿಕೆ

ಸಾಹಿತಿ ಕುಂ. ವೀರಭದ್ರಪ್ಪ ಅವರಿಗೆ ಬಂತು ಪತ್ರ

 

ಹೊಸಪೇಟೆ (ವಿಜಯನಗರ), ೯- ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ, ಸಾಹಿತಿ ಸಾಹಿತಿ ಕುಂ. ವೀರಭದ್ರಪ್ಪ ಸೇರಿದಂತೆ ೬೧ ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ.

ಒಂದು ಬಿಳಿ ಕಾಗದದ ಎರಡೂ ಪುಟಗಳಲ್ಲಿ ಕನ್ನಡದಲ್ಲಿ ಬರೆದಿರುವ ಪತ್ರ ಹೆಸರು ಮತ್ತು ವಿಳಾಸವಿಲ್ಲದ ‘ಸಹಿಷ್ಣು ಹಿಂದೂ’ ಹೆಸರಿನಲ್ಲಿ ’೬೧ಕ್ಕೂ ಹೆಚ್ಚು ಮಂದಿ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. ದೇಶದ್ರೋಹಿ ಬುದ್ಧಿಜೀವಿ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ’ ಎಂದು ಪತ್ರದಲ್ಲಿ ಬೆದರಿಸಲಾಗಿದೆ.

ಕೊಲೆ ಬೆದರಿಕೆ ಪತ್ರದ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ, ‘ನನಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಕೊಲೆ ಬೆದರಿಕೆ ಪತ್ರ ಬಂದಿದ್ದು ಹೆಸರು ವಿಳಾಸ ಇಲ್ಲದೆ ಬರೆದಿರುವ ಪತ್ರ ಇದು. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಹೆಸರುಗಳೂ ಇವೆ ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ‘ಹಿಜಾಬ್, ಮುಸ್ಲಿಮರ ಪರವಾಗಿ ಮತ್ತು ಭಗವದ್ಗೀತೆ ವಿರುದ್ಧವಾಗಿ ನೀವುಗಳು ೬೧ಕ್ಕೂ ಹೆಚ್ಚು ಮಂದಿ ಸಾಹಿತಿಗಳು ರಾಜ್ಯ ಸರಕಾರಕ್ಕೆ ಪತ್ರ ಬರೆದ ಕುರಿತು’ ಎಂದು ಪತ್ರದಲ್ಲಿ ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.

You might also like
Leave a comment