This is the title of the web page

ಸಿದ್ದರಾಮಯ್ಯ, ಸುರ್ಜೇವಾಲಾ, ಡಿಕೆಶಿ ಬಂಧನ

ಬೆಂಗಳೂರು 14- ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೆ.ಎಸ್‌. ಈಶ್ಚರಪ್ಪ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ಕಾಂಗ್ರೆಸ್ ನಾಯಕರಾದ ರಣದೀಪಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅಭಿವೃದ್ಧಿ ಕಾಮಗಾರಿಗಳಿಗೆ ೪೦% ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರಿಗೆ ನ್ಯಾಯ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ನಿವಾಸ “ಕುಮಾರಕೃಪಾ” ರಸ್ತೆಯಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧಗೊಳಿಸಿದ ಪೋಲೀಸರು, ರೇಸ್ ಕೋರ್ಸ ರಸ್ತೆಯ ತುಂಬೆಲ್ಲ ಖಾಕಿ ಸರ್ಪಗಾವಲು ಹಾಕಲಾಗಿತ್ತು.

ರೇಸ್ ಕೋರ್ಸ ರಸ್ತೆಯ ಕಾಂಗ್ರೆಸ್ ಭವನದಿಂದ‌ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾಂಗ್ರೆಸ್‌ ನಾಯಕರು, ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದರು. ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಭವನದಿಂದ ಆಗಮಿಸಿದ ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಪೊಲೀಸ್‌ ಬ್ಯಾರಿಕೇಡ್‌ ದಾಟಲು ಪ್ರಯತ್ನಿಸಿದರು. ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದರು. ಆದರೂ ಕಾಂಗ್ರೆಸ್‌ ನಾಯಕರು ಘೇರಾವ್‌ ಹಾಕಲು ಪ್ರಯತ್ನಿಸಿದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ನಡುವೆ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಯಾವುದೇ ಕ್ರಮ ಕೈಗೊಳ್ಳಲಾಗುವುದು ಎಂದು ಇಂದು ಮುಂಜಾನೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದಾಗ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಾಹನದಲ್ಲಿ ಕರೆದೊಯ್ದರು.

ಈ ಸಮಯದಲ್ಲಿ ಕಾಂಗ್ರೆಸ್ ಕೇಂದ್ರ ನಾಯಕ ಹಾಗು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪದಿಂಗ್ ಸುರ್ಜೇವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ‌ ಆದಿ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಯಿತು.

You might also like
Leave a comment