This is the title of the web page

ಅಗ್ನಿಪಥ ಯೋಜನೆಯನ್ನು ತಕ್ಷಣ ರದ್ದುಪಡಿಸಲು ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ೧೭- ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಅಗ್ನಿಪಥ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ನೇಮಕಾತಿ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿ ಅವರೇ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಉದ್ಯೋಗದ ಅಭದ್ರತೆ, ಭವಿಷ್ಯದ ಬಗ್ಗೆ ಹುಟ್ಟು ಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಎಂದು ಕಿಡಿಕಾರಿದ್ದಾರೆ.

 

You might also like
Leave a comment