Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಕಳ್ಳತನ ಆರೋಪ : ಮಸೀದಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು 


ಕಲಬುರಗಿ: ಮಸೀದಿಯಲ್ಲಿದ್ದುಕೊಂಡು ರಾತ್ರಿ ಹೊತ್ತಿನಲ್ಲಿ ಕಳ್ಳತನ ಮಾಡುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಗ್ರಾಮದ ಜನರು ಮಸೀದಿಗೆ ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಆನೂರು ಗ್ರಾಮದಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ 9 ಜನ ಮುಸ್ಲಿಮರು ಆನೂರು ಗ್ರಾಮದ ಮಸೀದಿಯಲ್ಲಿ ಉಳಿದುಕೊಂಡಿದ್ದರು. ಇವರು ರಾತ್ರಿ ಹೊತ್ತಿನಲ್ಲಿ ಕಳ್ಳತನ ಕೃತ್ಯದಲ್ಲಿ ತೊಡಗುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ನಿನ್ನೆ ರಾತ್ರಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದರು. ನಂತರ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ್ದಾರೆ.

ಇದೀಗ ಸಿಕ್ಕ ಬಿದ್ದ ಕಳ್ಳರು ನಾವಲ್ಲ, ನಾವೆಲ್ಲಾ ಜಮಾತ್​ಗೆ ಬಂದಿದ್ದೇವೆ ಎಂದು ಪೊಲೀಸರಲ್ಲಿ ಹೇಳುತ್ತಿದ್ದಾರೆ. ಸದ್ಯ ಪೊಲೀಸರು 5 ಜನರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


A B Dharwadkar
the authorA B Dharwadkar

Leave a Reply