ಬೆಳಗಾವಿ : ಜಾನುವಾರುಗಳಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಬೆಳಗಾವಿ ಜಿಲ್ಲೆಯ 317 ಗ್ರಾಮಗಳಲ್ಲಿ ಒಟ್ಟು 3,500 ಕ್ಕೂ ರಾಸುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ.
3,500 ಕ್ಕೂ ರಾಸುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದಕ್ಕೆ ಪರಿಹಾರಕ್ಕಾಗಿ ರೈತರು ಆಗ್ರಹಿಸಿದ್ದಾರೆ. ಚರ್ಮಗಂಟು ರೋಗ ಮಾರಣಾಂತಿಕ ರೋಗ ಅಲ್ಲ. ರೋಗ ಕಂಡುಬಂದಲ್ಲಿ ಹತ್ತಿರದ ಪಶು ವೈದ್ಯರನ್ನು ಸಂಪರ್ಕಿಸಬೇಕು. ಸೊಳ್ಳೆ, ಉಣ್ಣೆಗಳಿಂದ ರೋಗ ಹರುಡುತ್ತಿದೆ. ಇದಕ್ಕಾಗಿ ಮುನ್ನೆಚ್ಚರಿಕೆ ವಹಿಸಬೇಕು. ಬೆಳಗ್ಗೆ, ಸಾಯಂಕಾಲ ಜಾನುವಾರು ಕಟ್ಟುವ ಕೊಟ್ಟಿಗೆಯನ್ನು ಸ್ವಚ್ಛ ಮಾಡಬೇಕು. ಹಾಲು, ಹಾಲಿನ ಉತ್ಪನ್ನಗಳಿಂದ ಯಾವುದೇ ರೋಗ ಬರಲ್ಲ. ಜನರು ಯಾವುದೇ ಭಯಪಡುವ ಅವಶ್ಯಕತೆ ಇಲ್ಲ ಎಂದು ಪಶು ವೈದ್ಯರು ತಿಳಿಸಿದ್ದಾರೆ.