ಬೆಂಗಳೂರು : ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ, ಕರ್ನಾಟಕ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮತ್ತು ಗೋವಾ ವಿಮೋಚನೆಗೆ ಕೆಲಸ ಮಾಡಿದ ಕನ್ನಡಿಗರಿಗೆ ಪಿಂಚಣಿ ನೀಡಲಾಗುತ್ತದೆ, ಈ ಸಂಬಂಧ ಸರ್ಕಾರ ಅಗತ್ಯ ದಾಖಲೆಗಳನ್ನು ತರಿಸಿಕೊಳ್ಳಲಿದೆ ಎಂದು ತಿಳಿಸಿದರು.