ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ ಮೈದಾನದಲ್ಲಿ ಗಣೇಶೋತ್ಸವಕ್ಕೆ ಆಚರಿಸಲು ಅನುಮತಿ ನೀಡಿರುವ ಬೆನ್ನಲ್ಲೇ ವಿವಿಧ ಸಂಘಟನೆಗಳು ಮೈದಾನದಲ್ಲಿ ಉತ್ಸವ ಆಚರಣೆಗೆ ಅನುಮತಿ ಕೇಳುತ್ತಿವೆ.
ಸದ್ಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಅನುಮತಿ ನೀಡಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನಾ ಸಂಘಟನಾ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಹೀಗಾಗಿ ಅನೇಕ ದೇಶ ಭಕ್ತಿಯ ಕಾರ್ಯಕ್ರಮಗಳಿದ್ದು, ನಮಗೆ ಮೈದಾನ ನೀಡಬೇಕೆಂದು ಸಂಘಟಕರು ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಬಳಿಕ, ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಇದರಿಂದ ಮಾಹಾನಗರ ಪಾಲಿಕೆ ಗೊಂದಲಕ್ಕೆ ಸಿಲುಕಿದೆ.