Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಎಸ್ ಎಸ್ ಎಲ್ ಸಿ ಪರೀಕ್ಷೆ ನೋಂದಣಿ ದಿನಾಂಕ ವಿಸ್ತರಣೆ 


ಬೆಂಗಳೂರು: 2023ರ ಮಾರ್ಚನಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಾಗಿ ರಾಜ್ಯದ ಶಾಲಾ -ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕವನ್ನು ವಿಸ್ತರಿಸಿ, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವಂತ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು, 2023ನೇ ಮಾರ್ಚನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮುಖಾಂತರ ನೋಂದಾಯಿಸಲು ದಿನಾಂಕವನ್ನು ನಿಗದಿ ಪಡಿಸಿ ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ.

ಎಸ್ ಎಲ್ ಎಲ್ ಸಿ ಮುಖ್ಯ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಇದ್ದ ಕೊನೆಯ ದಿನಾಂಕವನ್ನು, 10-11-2022ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.


A B Dharwadkar
the authorA B Dharwadkar

Leave a Reply