This is the title of the web page

ಎಸ್ ಎಸ್ ಎಲ್ ಸಿ ಪರೀಕ್ಷೆ; ಸಮವಸ್ತ್ರ ಕಡ್ಡಾಯ, ಹಿಜಾಬ್ ಗೆ ಅವಕಾಶ ಇಲ್ಲ

ಬೆಂಗಳೂರು, ೨೭-(ಸಮದರ್ಶಿ ಸುದ್ದಿ)- ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ಸೋಮವಾರದಿಂದ ಆರಂಭವಾಗುವ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆಯಲಿವೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ, ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಹಿಜಾಬ್ ಧರಿಸಿಕೊಂಡು ಬಂದರೆ ಪರೀಕ್ಷೆ  ಬರೆಯಲು ಪ್ರವೇಶ ನೀಡುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ ಸಮಯ ಇರುತ್ತದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.

ಈ ಬಾರಿ 4,52,732 ಬಾಲಕರು ಹಾಗೂ 4,21,110 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 4 ತೃತಿಯ ಲಿಂಗಿಗಳು, 5,307 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಸೇರಿ ರಾಜ್ಯದಲ್ಲಿ ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಸಿಕೊಂಡಿದ್ದಾರೆ.

15,387 ಶಾಲೆಗಳು ಪರೀಕ್ಷೆಗೆ ನೋಂದಾಯಿತಗೊಂಡಿದ್ದು ಈ ಪೈಕಿ 5,717 ಸರ್ಕಾರಿ, 3,412 ಅನುದಾನಿತ ಹಾಗೂ 6,258 ಅನುದಾನ ರಹಿತ ಶಾಲೆಗಳು ಒಟ್ಟು 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಈ ಬಾರಿಯೂ ಸಿಸಿ ಟಿವಿ ಕಣ್ಗಾವಲಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಲಿದ್ದು 3,275 ಸಾಮಾನ್ಯ ಕೇಂದ್ರಗಳು, 169 ಖಾಸಗಿ ಕೇಂದ್ರಗಳು ಗುರುತು ಮಾಡಲಾಗಿದೆ. ಸುಮಾರು 45,289 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಲಾಗಿದ್ದು, 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. 49,817 ಕೊಠಡಿ ಮೇಲ್ವಿಚಾರಕರ ನೇತೃತ್ವದಲ್ಲಿ ಪರೀಕ್ಷೆ ನಡೆಯುತ್ತದೆ. ಕಳೆದ ವರ್ಷ ಕೊರೋನಾ ಕಾರಣ ಬಹು ಆಯ್ಕೆ ಪ್ರಶ್ನೆಗಳ ಮೂಲಕ ಪರೀಕ್ಷೆ ನಡೆಸಲಾಗಿತ್ತು. ಜೊತೆಗೆ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರ ಪಾಸ್ ಮಾಡಿತ್ತು.

You might also like
Leave a comment