Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಎಸ್‌ಎಲ್‌ಎಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ


ಬೆಂಗಳೂರು: 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಈ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.

ದಿನಾಂಕ 01-04-2023, ಶನಿವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಹಾಗು ಸಂಸ್ಕೃತ

ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ

ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ದಿನಾಂಕ 10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ,

ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

 


A B Dharwadkar
the authorA B Dharwadkar

Leave a Reply