Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಬೆಳಗಾವಿ: ಇರಿದು, ಕಲ್ಲಿನಿಂದ ಜಜ್ಜಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ 


ಬೆಳಗಾವಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಮಾರಕಾಸ್ತ್ರದಿಂದ ಇರಿದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ‌ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶಿವಾಜಿ ನಗರಥ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ದುರ್ದೈವಿ. ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಈತನ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ.

ಶಿವಾನಂದ ಕರಿಗಾರ ಎಂಬವರ 16 ವರುಷದ ಮಗ ಪ್ರಜ್ವಲ್ ಹತ್ಯೆಗೊಳಗಾಗಿದ್ದು, ಆತನ ಬೆನ್ನು, ಹಿಂಬದಿಯ ಕುತ್ತಿಗೆಯ ಮೇಲೆ ಮಾರಕಾಸ್ತ್ರದಿಂದ ಹೊಡೆದ ಗುರುತುಗಳಿವೆ.

ಬುಧವಾರ ಶಾಲೆಗೆ ಹೋಗಿದ್ದ ಪ್ರಜ್ವಲ್ ರಾತ್ರಿಯಾದರೂ ಮನೆಗೆ ಹಿಂದಿರುಗದ ಕಾರಣ ಪಾಲಕರು ಕ್ಯಾಂಪ್ ಪೊಲೀಸರಿಗೆ ಮಾಹಿತಿ, ದೂರು ನೀಡಿದ್ದರು.

ಹಣಕಾಸಿನ ಇಲ್ಲವೇ ಪ್ರೀತಿ ಪ್ರೇಮದ ಹಿನ್ನಲೆಯಲ್ಲಿ ಈ ಕೃತ್ಯ ನಡೆದಿರಬಹುದೆಂದು ಮಾರಿಹಾಳ ಪೊಲೀಸರು ಶಂಕಿಸಿದ್ದು ಈ ಕುರಿತು ತನಿಖೆ ಕೈಕೊಂಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರೆಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ದೊರೆತಿದೆ.

ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ ಹಾಗೂ ಶ್ವಾಸನಾಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


A B Dharwadkar
the authorA B Dharwadkar

Leave a Reply