ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಇನ್ನು ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಸ್ತಿರುವ ಪ್ರದೇಶದಲ್ಲಿ, ವಲಸೆ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,655 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು.
ರಾಜ್ಯ ಸರ್ಕಾರ ಅಂಗನವಾಡಿಗಳಿಗೆ 268.98 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ.