Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ದೇವರ ತಲೆ ಮೇಲೆ ಕಾಲಿಟ್ಟು ವಿಚಿತ್ರ ಪೂಜೆ ಮಾಡುವ ಅರ್ಚಕ 


ದಾವಣಗೆರೆ: ಪೂಜಾರಿಯೊಬ್ಬ  ದೇವರಿಗೆ ವಿಚಿತ್ರ ಪೂಜೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಶಾಸಕ ಎಂಪಿ. ರೇಣುಕಾಚಾರ್ಯ ಕ್ಷೇತ್ರ ಹೊನ್ನಾಳಿ ತಾಲೂಕು ಕತ್ತಿಗೆ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇದು ನಡೆದಿದೆ.

ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ವಿಚಿತ್ರ ಪೂಜೆಯಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬೇಡರ ಕಣ್ಣಪ್ಪ ಶಿವನಿಗೆ ಒಂದು ಕಣ್ಣು ದಾನ ಕೊಟ್ಟು ಇನ್ನೊಂದು ಕಣ್ಣು ಕೊಡಲು ಶಿವಲಿಂಗದ ಮೇಲೆ ಕಾಲಿಡುವಂತೆ ಈ ಅರ್ಚಕ ಮಹೇಶ್ವರಯ್ಯ, ಆಂಜನೇಯ ಸ್ವಾಮೀ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಾರೆ. ಅರ್ಚಕನ ಪೂಜೆ ವಿಧಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ.


A B Dharwadkar
the authorA B Dharwadkar

Leave a Reply