ಬೈಲಹೊಂಗಲ: ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ನಿಲಯದಲ್ಲಿ ಇತರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.