ಪಿಯುಸಿ ಪರೀಕ್ಷೆ ದಿನವೇ ವಿದ್ಯಾರ್ಥಿನಿ ಸಾವು

A B Dharwadkar
ಪಿಯುಸಿ ಪರೀಕ್ಷೆ ದಿನವೇ ವಿದ್ಯಾರ್ಥಿನಿ ಸಾವು

ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆಯ ಆರಂಭದ ದಿನವೇ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಚಿಕ್ಕೋಡಿ ತಾಲೂಕು ಬಂಬಲವಾಡ ಗ್ರಾಮದಲ್ಲಿ ಫೆ. 28ರ ಶನಿವಾರ ನಡೆದಿದೆ.

ಬಂಬಲವಾಡ ಗ್ರಾಮದ ಭೂಮಿಕಾ ಮಾಳಂಗಿ (17) ಮೃತಪಟ್ಟ ವಿದ್ಯಾರ್ಥಿನಿ.

ಚಿಕ್ಕೋಡಿ ಪಟ್ಟಣದ ಚಿಂಚಣಿಯ ಪದವಿ ಪೂರ್ವ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಶನಿವಾರ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನ ಪರೀಕ್ಷೆ ಬರೆಯಲು ಬೆಳಿಗ್ಗೆ ಬೇಗ ಎದ್ದು ಅಧ್ಯಯನ ಮಾಡಿಕೊಂಡು, ಸ್ನಾನ ಮುಗಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಆಕೆಗೆ ಏಕಾಏಕಿ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ.

ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.