ಬಾಗಲಕೋಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯಿಂದ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಕಳೆದ 53 ದಿನಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ ಲಭಿಸಿದೆ.
ಪ್ರತಿ ಟನ್ ಕಬ್ಬಿಗೆ 2,850 ರೂ. ದರ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
ಕಳೆದ 53 ದಿನಗಳಿಂದ ಕಬ್ಬು ಬೆಳೆಗಾರರು ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದರು. ಇಂದು ಮುಖ್ಯಮಂತ್ರಿ ಬೊಮ್ಮಾಯಿ ಬಾಗಲಕೋಟ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ ಪ್ರತಿ ಟನ್ ಕಬ್ಬಿಗೆ 2,850 ರೂ. ಕೊಡಿಸುವುದಾಗಿ ತಿಳಿಸಿದರು.
ಬಳಿಕ ಎಡಿಸಿ ಮಹದೇವ ಮುರಗಿ ಹಾಗೂ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲಳ್ಳಿ ಪ್ರತಿಭಟನಾ ನಿರತರ ಸ್ಥಳಕ್ಕೆ ತೆರಳಿ ಮಾಹಿತಿ ನೀಡಿದ್ದಾರೆ. ಆಗ ಕಬ್ಬು ಬೆಳೆಗಾರರು ಹೋರಾಟ ಕೈ ಬಿಟ್ಟರು.