This is the title of the web page

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ

ಬೆಂಗಳೂರು, 28- ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗಳು ಪದ್ಮಾವತಿ ಅವರ ಪುತ್ರಿ ಡಾ.ಸೌಂದರ್ಯ ಅವರು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು ತಾವು ವಾಸವಿದ್ದ ಅಪಾರ್ಟ ಮೆಂಟ್ ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗುತ್ತಿದೆ.

2018ರಲ್ಲಿ ಮದುವೆಯಾಗಿದ್ದ ಸೌಂದರ್ಯ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಒಂಭತ್ತು ತಿಂಗಳ ಮಗುವಿದ್ದು ಅದರಂತೆ ಆಕೆ ಗರ್ಭಿಣಿಯಾಗಿದ್ದರು ಎಂದು ಹೇಳಲಾಗುತ್ತಿದೆ.

ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗುತ್ತಿದ್ದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You might also like
Leave a comment