This is the title of the web page

ಶಾಲಾ ಮಕ್ಕಳ ಬೇಸಿಗೆ ರಜೆ ಹೆಚ್ಚಿಸಲು ಮನವಿ

 

ಬೆಂಗಳೂರು, ೪- ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಮುಂದುವರಿದಿರುವ ಕಾರಣ ಪ್ರಸಕ್ತ ಸಾಲಿನ ಬೇಸಿಗೆ ರಜೆಯನ್ನು ವಿಸ್ತರಿಸುವ ಸಾಧ್ಯತೆ ಇದೆ.

ಮೇ 16 ರಿಂದ 2022 -23 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು ಶಾಲೆಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿವರ್ಷ ಮೇ 29 ರಂದು ಶಾಲೆ ಆರಂಭವಾಗುತ್ತಿತ್ತು. ಕೊರೋನಾ ಕಾರಣದಿಂದ ಎರಡು ವರ್ಷ ಶೈಕ್ಷಣಿಕ ಅವಧಿ ವಿಳಂಬವಾಗಿದೆ.

ಈ ಬಾರಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಅವಧಿ ವಿಸ್ತರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ತಾಪಮಾನ ಮುಂದುವರೆದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಬೇಸಿಗೆ ರಜೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

You might also like
Leave a comment