This is the title of the web page

ಹಿಜಾಬ್ ಬಗ್ಗೆ ತುರ್ತು ವಿಚಾರಣೆಗೆ ಸುಪ್ರೀಮ ಕೋರ್ಟ ಮತ್ತೆ ನಿರಾಕರಣೆ

ಹೊಸದಿಲ್ಲಿ, ೨೪-: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜುಗಳ ಅಧಿಕಾರವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸಲ್ಲಿಸಿರುವ ಮೇಲ್ಮನವಿಗಳ ಬಗ್ಗೆ ತುರ್ತು ವಿಚಾರಣೆ ನಡೆಸಬೇಕೆಂಬ ಕೋರಿಕೆಯನ್ನು ಸುಪ್ರೀಮ ಕೋರ್ಟ ಗುರುವಾರ ಮತ್ತೊಮ್ಮೆ ತಿರಸ್ಕರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ. ರಮಣ ಅವರ ಮುಂದೆ ಹಿರಿಯ ವಕೀಲ ದೇವದತ್ತ ಕಾಮತ್ ಪ್ರಸ್ತಾಪಿಸಿದಾಗ ಈ ವಿಷಯವನ್ನು ಅತಿರಂಜಿತಗೊಳಿಸಬೇಡಿ ಎಂದು ಕೇಳಿಕೊಂಡರು ಮತ್ತು ವಿಷಯದ ವಿಚಾರಣೆಗೆ ಯಾವುದೇ ನಿರ್ದಿಷ್ಟ ದಿನಾಂಕವನ್ನು ನೀಡಲು ನ್ಯಾಯಮೂರ್ತಿಗಳು ನಿರಾಕರಿಸಿದರು

ವಿದ್ಯಾರ್ಥಿನಿಯರಿಗೆ ಪರೀಕ್ಷೆಗಳು ಸಮೀಪಿಸುತ್ತಿವೆ ಎಂದು ವಕೀಲ ಕಾಮತ್ ಅವರು ಹೇಳಿದಾಗ ಇದಕ್ಕೂ ಪರೀಕ್ಷೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದರು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ಕಾಲೇಜು ಕ್ಯಾಂಪಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ (ಶೀರ್ಷವಸ್ತ್ರ) ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಪರಿಣಾಮಕಾರಿಯಾಗಿ ಅಧಿಕಾರ ನೀಡುವ ಸರ್ಕಾರಿ ಆದೇಶವನ್ನು ಎತ್ತಿ ಹಿಡಿದಿತ್ತು ಹಾಗೂ ಹಿಜಾಬ್‌ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಕರ್ನಾಟಕ ಹೈಕೋರ್ಟ ಮಾರ್ಚ 15 ರಂದು ಹೇಳಿತ್ತು.

You might also like
Leave a comment