ಹೊಸದಿಲ್ಲಿ: ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ ಲೋಕಾಯುಕ್ತಕ್ಕೆ ಬಲ ನೀಡಲಾಗಿತ್ತು. ಈ ಸಂಬಂಧ ಸುಪ್ರೀಮ ಕೋರ್ಟ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರಣೆ ನಡೆಸಿದ ಸುಪ್ರೀಮ ಕೋರ್ಟ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ನಾಲ್ಕು ವಾರಗಳ ಕಾಲ ಅರ್ಜಿಯ ವಿಚಾರಣೆ ಮುಂದೂಡಿಕೆ ಮಾಡಿದೆ.
ಇಂದು ಎಸಿಬಿ ರದ್ದು ಸಂಬಂಧ ಸುಪ್ರೀಮ ಕೋರ್ಟಗೆ ಸಲ್ಲಿಕೆಯಾಗಿದ್ದ ಖಾಸಗಿ ಅರ್ಜಿಯನ್ನು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು. ಎಸಿಬಿ ರದ್ದು ಪಡಿಸಿರುವ ಹೈಕೋರ್ಟ ಆದೇಶ ಸಂಬಂಧ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ತಿಳಿಸುವಂತೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಅರ್ಜಿಯ ವಿಚಾರಣೆಯನ್ನು ಮುಂದಿನ 4 ವಾರಗಳು ಕಾಲ ಮುಂದೂಡಿದೆ.
ಕರ್ನಾಟಕ ಹೈಕೋರ್ಟನಿಂದ ಎಸಿಬಿಯನ್ನು ರದ್ದುಗೊಳಿಸಲಾಗಿತ್ತು. ಇಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಲಾಗಿತ್ತು. ಈ ಮೂಲಕ ಲೋಕಾಯುಕ್ತಕ್ಕೆ ಬಲ ನೀಡಿತ್ತು. ಈ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿಐಜಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ಕೇಸ್ ಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಂಡು ತನಿಖೆ ನಡೆಸುವಂತೆಯೂ ಆದೇಶಿಸಿದ್ದರು.