ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ
ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ವಿಚಾರಣೆ ಬಳಿಕ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ರಾ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿತು.
ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಬಿ.ಪಿ ಸುರೇಶ್, ಹಿಂದುಯೇತರ ವ್ಯಕ್ತಿಗಳು ಪೂಜೆ ಮಾಡುವಂತಿಲ್ಲ ಎಂದು ವಾದಿಸಿದರು. ಆದರೆ ವಾದವನ್ನು ಒಪ್ಪಿಕೊಳ್ಳಲು ಕೋರ್ಟ್ ನಿರಾಕರಿಸಿತು. ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಹೇಳಿದರು.

