ಹೊಸದಿಲ್ಲಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದ್ದು, ಬಿ ಎಸ್ ವೈ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಮ ಕೋರ್ಟ ತಿರಸ್ಕರಿಸಿದೆ.
ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಸುಪ್ರೀಮ ಕೋರ್ಟ ತಿರಸ್ಕರಿಸಿದೆ.
ನಾನು ಈ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಮ ಕೋರ್ಟ ಯಡಿಯೂರಪ್ಪ ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್ ವೈಗೆ ಹಿನ್ನಡೆಯಾಗಿದೆ.