ಹೊಸದಿಲ್ಲಿ: ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಮ ಕೋರ್ಟ ತ್ರಿಸದಸ್ಯ ಪೀಠ ರಚನೆ ಮಾಡುವುದನ್ನು ಪರಿಗಣಿಸುವುದಾಗಿ ಸುಪ್ರೀಮ ಕೋರ್ಟ ಹೇಳಿದೆ. ಈ ಬಗ್ಗೆ ಕೋರ್ಟ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ.
ಕರ್ನಾಟಕದಲ್ಲಿ ಫೆಬ್ರವರಿ 6 ರಿಂದ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ವಿ.ರಾಮಸುಬ್ರಮಣಿಯನ್ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ಪೀಠ ಗಮನಿಸಿತು.
ಕಳೆದ ವರ್ಷ ಹಿಜಾಬ್ ಪ್ರಕರಣದಲ್ಲಿ ಸುಪ್ರೀಮ ಕೋರ್ಟಿನ ದ್ವಿಸದಸ್ಯ ಪೀಠವು ಭಿನ್ನಮತದ ತೀರ್ಪು ನೀಡಿತ್ತು. ಇದೀಗ ಸಾಂವಿಧಾನಿಕ ಪೀಠದ ಮುಂದೆ ಮರು ವಿಚಾರಣೆ ನಡೆಯಲಿದೆ.
ನಾನು ಈ ಬಗ್ಗೆ ಪರಿಶೀಲಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ವಿಚಾರಣೆಗೆ ದಿನಾಂಕ ನಿಗದಿಪಡಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.
ಹಿಜಾಬ್ ವಿವಾದದ ಕುರಿತು ಸುಪ್ರೀಮ ಕೋರ್ಟ್ನ ಇಬ್ಬರು ನ್ಯಾಯಾಧೀಶರ ಪೀಠವು ಕಳೆದ ವರ್ಷ ಅಕ್ಟೋಬರ 13ರಂದು ವಿಭಿನ್ನ ತೀರ್ಪುಗಳನ್ನು ನೀಡಿದ್ದವು.