This is the title of the web page

ಮದುವೆಯಾದ ಏಳೇ ದಿನಕ್ಕೆ ಯುವಕ ನೇಣಿಗೆ ಶರಣು 

 

ಬೆಳಗಾವಿ, ೧೮- ಮದುವೆಯಾದ ಖುಷಿಯಲ್ಲಿದ್ದ ಹೆಂಡತಿ ಕಣ್ಣಿರಲ್ಲಿ ಕೈ ತೊಳೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮದುವೆಯಾದ ಏಳೇ ದಿನಕ್ಕೆ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ.

ದೇಮಪ್ಪ ಸನದಿ (23) ಮೃತ ಯುವಕ. ಕಳೆದ ವಾರವಷ್ಟೇ ತನ್ನ ಸೋದರತ್ತೆಯ ಮಗಳನ್ನು ಮದುವೆಯಾಗಿದ್ದನು‌. ತನ್ನ ಸಂಬಂಧಿಕರ ಮನೆಗೆ ಹೋಗಿ ಮನೆಗೆ ಬಂದ ಬಳಿಕ ರಾತ್ರಿ ಮಲಗುವ ಕೊಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದೇಮಪ್ಪನ ಪತ್ನಿ ಹಾಗೂ ಆಕೆಯ ಪಾಲಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You might also like
Leave a comment