ಶಿವಮೊಗ್ಗ: ಶಂಕಿತ ಉಗ್ರ ಮಾಜ್ ತಂದೆ ಮುನೀರ ಅಹ್ಮದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮುನೀರ ಅಹ್ಮದ , ಚಿಕಿತ್ಸೆ ಫಲಿಸದೇ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ತೀರ್ಥಹಳ್ಳಿ ಮೂಲದವರಾದ ಮುನೀರ ಅಹಮದ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಮುನೀರ ಅಹ್ಮದ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿರಬಹುದು ಎನ್ನಲಾಗಿದೆ.
ಮುನೀರ ಅಹಮದ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದರು. ನ್ಯಾಯಾಧೀಶರ ಅನುಮತಿ ಪಡೆದು ಶಂಕಿತ ಉಗ್ರ ಮಾಜ್ನನ್ನು ತಂದೆಯ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.