Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Local News

ಸುವರ್ಣಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ


ಬೆಳಗಾವಿ : ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಭಿವೃದ್ದಿಗಾಗಿ ಆಧುನಿಕ ವಾತಾವರಣಕ್ಕೆ ಒಗ್ಗಬೇಕಾಗುತ್ತದೆ. ಆದರೆ ಅದೇ ಕಾರಣಕ್ಕಾಗಿ ನಾಡು, ನುಡಿ, ಸಂಸ್ಕೃತಿ ಮರೆತು ಮೂಢರಾಗದೇ ನಮ್ಮತನದ ಅಭಿಮಾನವನ್ನು ಮೆರೆಯಲೇಬೇಕಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಸುವರ್ಣ ಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಗುವಿಗೆ ಎದೆಹಾಲು ಕುಡಿಸಲಾರಳು ಆಧುನಿಕ ತಾಯಿ ಇವಳಯ್ಯ..ಬಾಟಲಿ ಹಾಲು ಕುಡಿಸಿ ಚಾಕಲೇಟ್ ತಿನ್ನಿಸಿ ಪಾಪ್ ಸಾಂಗ್ ಹಾಡುವಳಯ್ಯ..’ ಎಂದು ಜನಪದ ಗೀತೆ ಹಾಡುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಅವರು ಎಲ್ಲೆ ಇದ್ದರೂ, ಹೇಗೆ ಇದ್ದರೂ ಕನ್ನಡದ ಪ್ರತಿ ತಾಯಿಯೂ ಕನ್ನಡತಿಯೇ ಆಗಿರಬೇಕು ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿ ಮಾತನಾಡಿದ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರು, ನಾಡು, ನುಡಿ ವಿಚಾರವಾಗಿ ಅಭಿಮಾನ ಬರೀ ಕೂಗಾಟ, ಪ್ರತಿಭಟನೆಗೆ ಸೀಮಿತವಾಗಬಾರದು ಬದಲಾಗಿ ಪ್ರತಿ ಕ್ಷಣವೂ ಅದನ್ನು ಜೀವಿಸಬೇಕು ಎಂದು ಹೇಳಿದರು.

ಏಕಕಾಲಕ್ಕೆ ನಾಡಗೀತೆ ಪ್ರಸ್ತುತ:

ಕಾರ್ಯಕ್ರಮ ಆರಂಭಕ್ಕೂ ಮುಂಚಿತವಾಗಿ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಂಗೀತ ಶಿಕ್ಷಕ ವಿನಾಯಕ ಮೋರೆ ನೇತೃತ್ವದಲ್ಲಿ ಏಕಕಾಲಕ್ಕೆ ನಾಡಗೀತೆ ಪ್ರಸ್ತುತ ಪಡಿಸಿದರು.

ನಾಡ ದೇವಿಗೆ ಕೋಟಿ ಕಂಠದಾರತಿ:

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಪ್ರಸ್ತುತ ಪಡಿಸುವ ಮೂಲಕ ವಿದ್ಯಾರ್ಥಿ, ವಿದ್ಯಾರ್ಥಿನಿ, ಅಧಿಕಾರಿಗಳು ಸಂಗೀತ ಶಿಕ್ಷಕ ವಿನಾಯಕ ಮೋರೆ ನೇತೃತ್ವದಲ್ಲಿ ಭುವನೇಶ್ವರಿಗೆ ಕೋಟಿ ಕಂಠದಾರತಿ ಬೆಳಗಿದರು.

ಕನ್ನಡ ಸಂಕಲ್ಪ:

ಕನ್ನಡ ನೆಲ, ಜಲ, ಜನ, ಸಂಸ್ಕೃತಿ, ಪರಂಪರೆಯ ರಕ್ಷಣೆಗೆ ಬದ್ಧವಾಗಿರುತ್ತೇವೆ ಎಂದು ಸಾವಿರಾರು ಕನ್ನಡ ಮನಸುಗಳ ಒಕ್ಕೊರಲಿನಿಂದ ಪ್ರತಿಜ್ಞೆ ಮಾಡಿದರು.

ಆಗಸದಲ್ಲಿ ಬಲೂನ್ ಹಾರಾಟ:

ಕೋಟಿ ಕಂಠ ಗಾಯನದ ಯಶಸ್ವಿಪೂರ್ಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಎಲ್ಲ ಗಣ್ಯರ ಸಮ್ಮುಖದಲ್ಲೇ ಬಲೂನ್ಗಳ ಎರಡು ಗುಚ್ಛಗಳನ್ನ ಆಗಸದೆತ್ತರಕ್ಕೆ ಹಾರಿ ಬಿಡಲಾಯಿತು. ಹಳದಿ ಕೆಂಪು ಬಣ್ಣದ ಬಲೂನ್ ಗಳು ಆಸದರಲ್ಲಿ ಬಹಳ ವರ್ಣರಂಜಿತವಾಗಿ ತೇಲಾಡಿದವು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಸಿಇಒ ದರ್ಶನ ಹೆಚ್ ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಜಿಲ್ಲಾ ಪೊಲೀಸ್ ದಂಡಾಧಿಕಾರಿ ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಲಿದ್ದರು. ಸುನೀತಾ ದೇಸಾಯಿ ನಿರೂಪಿಸಿ ವಂದಿಸಿದರು.


A B Dharwadkar
the authorA B Dharwadkar

Leave a Reply