ಬೆಳಗಾವಿ : ಬೆಳಗಾವಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ ಆಗಿದ್ದ ಅಶೋಕ ಮಣ್ಣಿಕೇರಿ ವಿಧಿವಶರಾಗಿದ್ದಾರೆ. ಅವರಿಗೆ ೪೫ ವರ್ಷವಾಗಿತ್ತು.
ಮಧ್ಯರಾತ್ರಿ ಎದೆಯಲ್ಲಿ ನೋವು ಕಾಣಿಸಿಕೊಂಡಾಗ ಅವರನ್ನು ಇಲ್ಲಿಯ ಕೆಎಲ್ಈ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದರು.
ಅಶೋಕ ಅವರು ಜಿಲ್ಲಾಧಿಕಾರಿ, ಅಪರ್ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ ಕಚೇರಿಗಳಲ್ಲಿಯೂ ಸೇವೆ ಸಲ್ಲಿಸಿದ್ದಾರೆ.