This is the title of the web page

ದೇವಸ್ಥಾನದ ಜಮೀನು ವಿಚಾರ ಕೊಲೆ : ವಾಹನಗಳಿಗೆ ಬೆಂಕಿ 

 

ಬೆಳಗಾವಿ, ೧೯- ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಕೆಲ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಗಲಾಟೆಯಾಗಿ ಓರ್ವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಈ ವಿಷಯ ಎರಡು ಗುಂಪುಗಳ ನಡುವೆ ಹೊಡೆದಾಟಕ್ಕೂ ಕಾರಣವಾಗಿ, ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಗೌಂಡವಾಡ ಗ್ರಾಮದ ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಇರಿದು ಹತ್ಯೆ ಮಾಡಲಾಗಿದೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಕಾರು, ದ್ವಿಚಕ್ರ ವಾಹನಗಳು ಮತ್ತು ಮೂರು ಹುಲ್ಲಿನ ಬಣವಿಗೆ ಬೆಂಕಿ ಹಚ್ಚಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು.

ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ, ಪಿ.ವಿ. ಸ್ನೇಹಾ, ಗ್ರಾಮೀಣ ಎಸಿಪಿ ಗುಡಾಜಿ ಹಾಗೂ ಕಾಕತಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಬೆಳಗಾವಿ ನಗರಕ್ಕೆ ಹತ್ತಿಕೊಂಡಿರುವ ಈ ಗ್ರಾಮದಲ್ಲಿ ಪರಸ್ಥಿತಿ ಉದ್ವಿಗ್ನವಾಗಿದ್ದು ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

 

You might also like
Leave a comment