ರಾಯಚೂರು: ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರು ಶ್ರೀಘನಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.
ತರಗತಿಯಲ್ಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಸಿನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹದ ಶೇ. 40ರಷ್ಟು ಭಾಗ ಸುಟ್ಟು ಹೋಗಿದೆ. ಘಟನೆ ನಡೆದ ಬೆನ್ನಲ್ಲೇ ಗಂಭೀರ ಆರೋಪ ಹೊತ್ತಿರುವ ಶಿಕ್ಷಕ ಶಾಲೆಗೆ ಗೈರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳು ಬಾಲಕನಿಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದು ವಾರವಾದರೂ ಈ ವರೆಗೆ ಪ್ರಕರಣ ದಾಖಲಾಗಿಲ್ಲ.