This is the title of the web page

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಈಶ್ವರಪ್ಪ ವಜಾ ವರೆಗೂ ಹೋರಾಟ -ಕಾಂಗ್ರೆಸ್

ಬೆಂಗಳೂರು, 20- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಕಾಂಗ್ರೆಸ್ ನಾಯಕರು ಸದನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲಿದ್ದು, ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.

ರಾಷ್ಟ್ರಧ್ವಜದ ವದಲು ಕೆಂಪುಕೋಟೆ ಮೇಲೆ  ಕೇಸರಿ ಧ್ವಜ ಹಾರಿಸುತ್ತೇವೆ ಎಂದು ದೇಶದ್ರೋಹಿ ಹೇಳಿಕೆ ಕೊಟ್ಟಿರುವ ಸಚಿವರನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನು ವಜಾ ಮಾಡಬೇಕು. ಮುಖ್ಯಮಂತ್ರಿಗೆ ಸ್ವಾಭಿಮಾನ ಇದ್ದಿದ್ದರೆ ಅದೇ ದಿನ ವಜಾ ಮಾಡಬೇಕಿತ್ತು.

ಈಶ್ವರಪ್ಪಗೆ ದೇಶದ ಬಗ್ಗೆ ನಿಷ್ಠೆ ಇಲ್ಲ. ಈಶ್ವರಪ್ಪರನ್ನ ವಜಾ ಮಾಡದಿದ್ದರೆ ನಮ್ಮ ಹೋರಾಟವನ್ನು ಜಿಲ್ಲಾ, ತಾಲೂಕು ಮಟ್ಟದಲ್ಲಿ ಮುಂದುವರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಸಚಿವ ಈಶ್ವರಪ್ಪರನ್ನ ಸಮರ್ಥಿಸುತ್ತಿರುವುದಕ್ಕೆ ನಮ್ಮ ಖಂಡನೆ ಇದೆ ಎಂದು ಡಿ ಕೆ ಶಿವಕುಮಾರ ಹೇಳಿದ್ದಾರೆ.

You might also like
Leave a comment