ಬೆಳಗಾವಿ, ಜುಲೈ 28: : ಮಹಾಪೂರದ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಜುಲೈ 29 ಮತ್ತು ಮಂಗಳವಾರ, ಜುಲೈ 30 ರಂದು ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.
ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು;
ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ, ಹೊಸೂರ ಮತ್ತು ಬಡಕುಂದ್ರಿ ಗ್ರಾಮಗಳು
ಕಾಗವಾಡ ತಾಲ್ಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು ಬನಜವಾಡ ಗ್ರಾಮಗಳು
ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು ಜುಲೈ 30 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.