This is the title of the web page

ಹಿಂದಿನ ನೀರಾವರಿ ಮಂತ್ರಿ ಎಂ.ಬಿ.ಪಾಟೀಲರ ನಿಷ್ಕ್ರೀಯತೆ

ಬಾಗಲಕೋಟ, 10- ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ ಅವರು ಸಂಪೂರ್ಣ ನಿಷ್ಕ್ರೀಯರಾಗಿದ್ದರು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಕಾರಜೋಳ ಅವರು ದಾಖಲೆ ಸಮೇತ ವಿವರಣೆ ನೀಡಿದ್ದಾರೆ.

ಬಾಗಲಕೋಟದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದಿನ ನೀರಾವರಿ ಸಚಿವ ಎಂ. ಬಿ. ಪಾಟೀಲರನ್ನು ತರಾಟೆಗೆ ತೆಗೆದುಕೊಂಡರು.

ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಯ ನಂತರವೂ ಎಂ. ಬಿ. ಪಾಟೀಲ ಯಾವುದೇ ಕೆಲಸ ಮಾಡಲಿಲ್ಲ.

ಅಂದಿನ ಕಾನೂನು ಸಚಿವರು ಕಡತದ LAW 15 CWD 2013 ನಲ್ಲಿ ಮಾಡಿದ ಟಿಪ್ಪಣಿಯನ್ನು ಅವರು ವಿವರಿಸಿದರು. “ಕಾವೇರಿ ನೀರು ಹಂಚಿಕೆ ವಿಷಯದ ಬಗ್ಗೆ ರಚಿತವಾಗಿರುವ ಕಾವೇರಿ ಜಲ ವಿವಾದ ನ್ಯಾಯಾಧಿಕರಣ ನೀಡಿರುವ ಆದೇಶ ತಮಗೆ ತಿಳಿದಿರುವ ವಿಷಯವಾಗಿದೆ. ಸದರಿ ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಕರ್ನಾಟಕ ರಾಜ್ಯವು ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ಸದರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇರುತ್ತದೆ. ಅದರಂತೆ ಮೇಕೆದಾಟು ಜಲವಿದ್ಯುತ್ ಸಮಸ್ಯೆಯು ಗಂಭೀರವಾಗಿರುವುದರಿಂದ ಹಾಗೂ ನಾವು ಜನತೆಗೆ ನೀಡಿರುವ ಭರವಸೆಯಂತೆ ವಿದ್ಯುತ್ ಉತ್ಪಾದನೆಯನ್ನು ಹೆಚ್ಚು ಮಾಡಲೇಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಈ ಪ್ರತಿಷ್ಟಿತ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈಗಾಗಲೇ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವಲ್ಲಿ ಸಾಕಷ್ಟು ವಿಳಂಬವಾಗಿದೆ. ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂಬಂಧ ಅಡ್ವೋಕೇಟ್ ಜನರಲ್ ರವರು ನೀಡಿರುವ ಸಕಾರಾತ್ಮಕ ಅಭಿಪ್ರಾಯ ಮತ್ತು ಇತರೆ ಮಾಹಿತಿಯನ್ನು ಅವಗಾಹಿಸಿ ಈ ಕೂಡಲೇ ಯೋಜನೆಯನ್ನು ಪ್ರಾರಂಭಿಸಲು ಸಂಬಂಧಪಟ್ಟವರಿಗೆ ಸೂಕ್ತ ಆದೇಶ ನೀಡಬೇಕಾಗಿದೆ ಕೋರಿದೆ” ಎಂದು ವಿವರವಾದ ಮತ್ತು ಸ್ಪಷ್ಟವಾದ ಟಿಪ್ಪಣಿಯನ್ನು ಮುಖ್ಯಮಂತ್ರಿಗಳಿಗೆ ಕಡತದಲ್ಲಿ ಕಳುಹಿಸಿದ್ದಾರೆ. ಮತ್ತು ಅಂದು ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಈ ಟಿಪ್ಪಣಿಯನ್ನು ಅನುಮೋದಿಸಿ, ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲರಿಗೆ ಕಳುಹಿಸಿದ್ದರು ಎಂದು ಸರ್ಕಾರದ ಕಡತಗಳಲ್ಲಿ ದಾಖಲಾಗಿದೆ ಎಂದು ಗೋವಿಂದ ಕಾರಜೋಳ ವಿವರಿಸಿದ್ದಾರೆ.

ಇಷ್ಟೆಲ್ಲಾ ಕಡತಗಳಲ್ಲಿ ಅನುಮೋದನೆ ದೊರಕಿದ ಮೇಲೆಯೂ ಸಹ ಆಗ ನೀರಾವರಿ ಮಂತ್ರಿಯಾಗಿದ್ದ ಎಂ.ಬಿ.ಪಾಟೀಲರು ಯಾವುದೇ ಕಾಮಗಾರಿಯನ್ನು ಪ್ರಾರಂಭ ಮಾಡಲಿಲ್ಲ ಎಂದು ಕಾರಜೋಳ ಅವರು ಎಂ.ಬಿ.ಪಾಟೀಲರಿಗೆ ತಮ್ಮ ಅಧಿಕಾರವಧಿಯಲ್ಲಿ ಮಾಡಬೇಕಾಗಿದ್ದ ಕರ್ತವ್ಯವನ್ನು ನೆನಪಿಸಿದರು.

12-11-2014 ರಂದೇ ಯೋಜನೆಗೆ ಅನುಮೋದನೆ ನೀಡಲಾಗಿದ್ದರೂ ಸಹ ಯಾಕೆ ಯೋಜನೆಯನ್ನು ಜಾರಿಗೊಳಿಸಲು ಪಾಟೀಲರು ಏಕೆ ಮೀನಾಮೇಷ ಮಾಡಿದರು ಎಂದು ಸಚಿವರು ಪ್ರಶ್ನಿಸಿದರು.

ಈಗ ಮೇಕೆದಾಟು ಪಾದಯಾತ್ರೆ ಕೇವಲ ಒಂದು ಗಿಮಿಕ್ ಆಗಿದೆ. ಭಾನುವಾರ ಆರಂಭಗೊಂಡಿರುವ ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆ ತನ್ನ ನಾಯಕರ ನಾಯಕತ್ವಕ್ಕಾಗಿ ನಡೆದ ಪೈಪೋಟಿಯೇ ಹೊರತು ಹೊರತು ಬೇರೇನೂ ಅಲ್ಲ. ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ರೂಪಿಸಿಲ್ಲ ಎಂದು ಜಲಸಂಪನ್ಮೂಲ ಸಚಿವರು ಟೀಕಿಸಿದರು.

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಭಾಗವಹಿಸುವವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ಕಾಳಜಿ ಇಲ್ಲದಿರುವುದು ಕಳವಳಕಾರಿಯಾಗಿದೆ ಎಂದರು.

“ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕು. ಹಾಗಾಗಿ ನಮ್ಮ ಸರ್ಕಾರ ಅವರನ್ನು ನಿರ್ಬಂಧಿಸಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಜನಸಂದಣಿ ಮತ್ತು 100 ಪ್ರತಿಶತ ಮಾಸ್ಕ ಬಳಕೆಯನ್ನು ಕಡ್ಡಾಯಗೊಳಿಸುವಂತೆ ನಾನು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸುತ್ತೇನೆ. ಈ ಪಾದಯಾತ್ರೆಯು ರಾಜ್ಯದ ಹಿತದೃಷ್ಟಿಯಿಂದ ಅಲ್ಲ. ಕಾಂಗ್ರೆಸ್‌ ನಾಯಕತು ನಾ ಮೇಲೂ ತಾ ಮೇಲೂ ಎಂಬ ಪೈಪೋಟಿಗೆ ಕಾರಣವಾಗಿದೆ ಎಂದರು.

You might also like
Leave a comment