This is the title of the web page

ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ -ಶಿಕ್ಷಣ ಮಂತ್ರಿ

ಬೆಂಗಳೂರು, 28- ಕೊರೋನಾ ಇರುವ ಕಾರಣ ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ ಹೇಳಿದ್ದಾರೆ.

ಪತ್ರಕರ್ತತೊಂದಿಗೆ ಮಾತನಾಡಿದ ಅವರು‌, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ. ಯಾವುದೇ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಮಾಡಲಾಗುವುದಿಲ್ಲ. ಪರೀಕ್ಷೆಗೂ ಶೇಕಡ.75 ಹಾಜರಾತಿ ಕಡ್ಡಾಯ ಮಾಡುವುದಿಲ್ಲ ಎಂದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತವೆ. ಪೂರ್ಣ ಪ್ರಮಾಣದ ಆಫ್‌ಲೈನ್‌ ತರಗತಿ ಪ್ರಾರಂಭ ಆಗುವವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ನಾಗೇಶ‌ ಹೇಳಿದರು.

ಕೋವಿಡ್ ಮೂರನೇ ಅಲೆಯಿಂದ ಯಾವ ವಿದ್ಯಾರ್ಥಿಗೂ ಹೆಚ್ಚಿನ ತೊಂದರೆ ಆಗಿಲ್ಲ. ಆದರೂ ಸಹ ಆರೋಗ್ಯ ವಿಚಾರದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳಲು ಆಗುವುದಿಲ್ಲ. ಆರೋಗ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

You might also like
Leave a comment