ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು 6 ವರ್ಷ ನಿಗದಿ ಪಡಿಸಿತ್ತು. ಈ ಬಳಿಕ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ 2025-26ನೇ ಶೈಕ್ಷಣಿಕ ವರ್ಷದಿಂದ ಅನ್ವಯ ಆಗುವಂತೆ ಕಡ್ಡಾಯಗೊಳಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 26-07-2022ರ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ತರಗತಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಮೊದಲಿನ ಆದೇಶವನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.