ಕಲಬುರಗಿ: ಜಿಲ್ಲೆಯಲ್ಲಿ ಮರಳು ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.
ಜೇವರ್ಗಿ ಠಾಣೆ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸಟೇಬಲ್ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.