Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಮೋದಿ ಸರ್ಕಾರದಿಂದಲೇ ಅನುಮತಿ


ಹೊಸದಿಲ್ಲಿ: 2002ರಲ್ಲಿ ಗುಜರಾತ್ ನರಸಂಹಾರದ ವೇಳೆ ಗರ್ಭಿಣಿ ಮಹಿಳೆ ಬಿಲ್ಕಿಸ್ ಬಾನೋ ಎಂಬ ಮಹಿಳೆ ಮತ್ತು ಆಕೆಯ ಕುಟುಂಬದ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಮಕ್ಕಳು ಸೇರಿದಂತೆ  ಆಕೆಯ ಕುಟುಂಬಸ್ಥರ ಸಾಮೂಹಿಕ ಹತ್ಯಾಕಾಂಡ ನಡೆಸಲಾಗಿತ್ತು.

ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಆದರೆ, ಆ ಅಪರಾಧಿಗಳನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು ಎಂದು ಗುಜರಾತ್ ಸರ್ಕಾರವು ಸುಪ್ರೀಮ ಕೋರ್ಟ​ನಲ್ಲಿ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಿಳಿಸಿದೆ.

ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬವನ್ನು ಕೊಂದ 11 ಮಂದಿ ಅಪರಾಧಿಗಳು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವಾಗಲೇ ಸಾವಿರ ದಿನಗಳ ಕಾಲ ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.

ಈ ಪ್ರಕರಣದ 11 ಆರೋಪಿಗಳು 14 ವರ್ಷಗಳ ಶಿಕ್ಷೆಯನ್ನು ಪೂರ್ತಿಗೊಳಿಸಿದ್ದರಿಂದ ಅವರ ಉತ್ತಮ ನಡವಳಿಕೆಯ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಯಿತು ಎಂದು ಗುಜರಾತ್ ಸರ್ಕಾರವು ಸುಪ್ರೀಮ ಕೋರ್ಟ್​ಗೆ ತಿಳಿಸಿತ್ತು.

ಈ ಬಗ್ಗೆ ಜುಲೈ 11ರಂದು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿತ್ತು ಎಂದು ಗುಜರಾತ್ ಸರ್ಕಾರ ಹೇಳಿದೆ.

ಕೇಂದ್ರದ ಮೋದಿ ಸರ್ಕಾರದ ಅನುಮೋದನೆಯ ನಂತರ ಈ ವರ್ಷದ ಆರಂಭದಲ್ಲಿ ಬಿಲ್ಕಿಸ್ ಬಾನೋ ಅತ್ಯಾಚಾರದ ಅಪರಾಧಿಗಳನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಮ ಕೋರ್ಟಗೆ ತಿಳಿಸಿತ್ತು.

ಆದರೆ ಸಿಬಿಐ ಮತ್ತು ವಿಶೇಷ ನ್ಯಾಯಾಲಯವು ಸಾಮೂಹಿಕ ಅತ್ಯಾಚಾರ ಮತ್ತು ಕೊನೆಯಂತಹ ಘೋರ ಅಪರಾಧ ಎಸಗಿದ್ದಕ್ಕಾಗಿ ಆ ಅಪರಾಧಿಗಳ ಬಿಡುಗಡೆಯನ್ನು ವಿರೋಧಿಸಿದೆ.

ಜುಲೈ 11ರಂದು ರಾಜ್ಯ ಸರ್ಕಾರ ಅನುಮೋದನೆಯನ್ನು ಕೋರಿದ ಎರಡು ವಾರಗಳಲ್ಲಿ ಗೃಹ ಸಚಿವಾಲಯದ ಇದು ದ್ವೇಷದ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ವಿಶೇಷ ನ್ಯಾಯಾಧೀಶ ಆನಂದ ಎಲ್ ಯಾವಲ್ಕರ ಕಳೆದ ವರ್ಷ ಮಾರ್ಚನಲ್ಲಿ ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಹೇಳಿದ್ದರು.


A B Dharwadkar
the authorA B Dharwadkar

Leave a Reply