This is the title of the web page

ಸೋಮವಾರದಿಂದ ಶಾಲೆ ಆರಂಭ, ಕಾಲೇಜ ಈಗಿಲ್ಲ -ಮುಖ್ಯಮಂತ್ರಿ

ಬೆಂಗಳೂರು, 10- ಸೋಮವಾರದಿಂದ ಶಾಲೆಗಳು ಪುನಾರಂಭವಾಗುತ್ತವೆ. ಆದರೆ ಎರಡನೇ ಹಂತದಲ್ಲಿ ಪಿಯುಸಿ ತರಗತಿಗಳನ್ನು ಆರಂಭ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರು, ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಇಂದು ಸಂಜೆ ನಡೆಸಿದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಸಮವಸ್ತ್ರ ಕುರಿತ ವಿವಾದ ಆಗಿತ್ತು. ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ. ನ್ಯಾಯಾಲಯ ಯಾವುದೇ ತೀರ್ಪು ನೀಡಿದರೂ ನಾವು ಅದನ್ನು ಗೌರವಿಸಬೇಕು. ಈಗ ವಿದ್ಯಾರ್ಥಿಗಳಲ್ಲಿ ಗೊಂದಲ ಕಡಿಮೆಯಾಗಿದೆ. ಬಾಹ್ಯಶಕ್ತಿಗಳಿಂದ ಪ್ರಚೋದನೆ ಇನ್ನೂ ಇದೆ. ಅದು ಕೂಡ ನಿವಾರಣೆಯಾಗಬೇಕು ಎಂದು ಹೇಳಿದರು.

ಶಾಂತಿ, ಸುವ್ಯವಸ್ಥೆ ಕಾಪಾಡಬೇಕು, ಮುಂದಿನ ಆದೇಶದವರೆಗೂ ಯಾವುದೇ ಧಾರ್ಮಿಕ ವಸ್ತ್ರ ಸಂಹಿತೆ ಹಾಕಬಾರದು ಎಂದು ಹೈಕೋರ್ಟ ಸೂಚನೆ ನೀಡಿದೆ.‌ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.

ಸೋಮವಾರದಿಂದ ಶಾಲೆಗಳು ಪುನಾರಂಭವಾಗುತ್ತವೆ. ಎರಡನೇ ಹಂತದಲ್ಲಿ ಪಿಯುಸಿ ತರಗಳನ್ನು ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ನಾಳೆ ಬೆಳಗ್ಗೆ ಶಿಕ್ಷಣ ಇಲಾಖೆ ಸಭೆ ಮಾಡುತ್ತಿದ್ದೇನೆ. ಬಳಿಕ ಸಂಜೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮಾಡುತ್ತಿದ್ದೇನೆ. ಈ ಬಳಿಕ ಪಿಯು ತರಗತಿಗಳ ಪುನರಾರಂಭದ ಬಗ್ಗೆ ತಿಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

You might also like
Leave a comment