ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ಈ ಸಲದ ವಿಧಾನಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ, ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಅಧಿವೇಶನಕ್ಕೆ ಬೇಕಾದ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ.

