ಹೊಸದಿಲ್ಲಿ : ಕೆಂಪು ಕೋಟೆ ಮೇಲೆ ನಡೆಸಿದ್ದ ದಾಳಿಗೆ ಸಂಬಂಧಿಸಿದಂತೆ ಲಷ್ಕರ್ ಎ ತೋಯ್ಬಾ ಸಂಘಟನೆಯ ಉಗ್ರ ಮೊಹಮ್ಮದ ಆರಿಫ್ ಗೆ ವಿಧಿಸಿದ್ದ ಮರಣದಂಡಣೆ ಶಿಕ್ಷೆಯನ್ನು ಸುಪ್ರೀಮ ಕೋರ್ಟ ಎತ್ತಿಹಿಡಿದಿದೆ.
2008ರಲ್ಲಿ ಕೆಂಪು ಕೋಟೆಗೆ ನುಗ್ಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ ಇಬ್ಬರು ಸೈನಿಕರು ಸೇರಿದಂತೆ ಮೂವರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಆರಿಫ ದೋಷಿ ಎಂಬುದು ಸಾಬೀತಾಗಿದ್ದರಿಂದ ಸುಪ್ರೀ ಕೋರ್ಟ ಮರಣದಂಡನೆ ಶಿಕ್ಷೆ ವಿಧಿಸಿತ್ತು. ತೀರ್ಪು ಮರುಪರಿಶೀಲಿಸುವಂತೆ ಆತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದ.
ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ ಮತ್ತು ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಗುರುವಾರ ಆರಿಫ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿತು.
ಎಲೆಕ್ಟ್ರಾನಿಕ್ ದಾಖಲೆಗಳನ್ನು ಪರಿಗಣಿಸುವಂತೆ ಮಾಡಲಾಗಿದ್ದ ಮನವಿಯನ್ನು ನಾವು ಪುರಸ್ಕರಿಸಿದ್ದೇವೆ. ಆತ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಲಯ ಈ ಹಿಂದೆ ನೀಡಿದ್ದ ತೀರ್ಪನ್ನು ನಾವು ಎತ್ತಿಹಿಡಿಯುತ್ತೇವೆ. ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.