Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಹಿಂದೂ ಪದ ಭಾರತದ್ದಲ್ಲ, ಅರ್ಥ ಅಶ್ಲೀಲವಾಗಿದೆ : ಸತೀಶ ಜಾರಕಿಹೊಳಿ


ನಿಪ್ಪಾಣಿ, ೭-: ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ‌ ಎನ್ನುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಭಾರತಕ್ಕೂ, ಪರ್ಷಿಯನ್‍ಗೂ ಏನು ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದವಾಗಿದೆ. ಹಿಂದೂ ನಮ್ಮದು ಹೇಗೆ ಆಯಿತು ಅನ್ನುವುದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆಲ್ಲ ನಾಚಿಕೆಯಾಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಸತೀಶ ಹೇಳಿದರು.

ಬಿಜೆಪಿ ನಾಯಕರು ಶಿವಾಜಿ ಬಗ್ಗೆ ಮಾತನಾಡುತ್ತಾರೆ. ಆದರೆ ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೆ ಶಿವಾಜಿ ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನೂ ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್‌ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ‌ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್‌ ತಯಾರಿಸಿದ್ದರು ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

ಪ್ರತಾಪಗಡ ಕೋಟೆಯಲ್ಲಿ ಶಿವಾಜಿಯು ಮಸೀದಿ ನಿರ್ಮಾಣ ಮಾಡಿರುವ ಇತಿಹಾಸವಿದೆ. ಅವರ ಕಾಲದಲ್ಲಿ ಸಮಾನತೆಯಿತ್ತು. ಆದರೆ ಈಗ ಮರಾಠಾ, ಮುಸ್ಲಿಂ, ದಲಿತರ ನಡುವೆ ದಿನನಿತ್ಯ ಜಗಳವಾಗುತ್ತಿವೆ. ಇತಿಹಾಸ ಬೇರೆ ಇದೆ. ನಮಗೆ ಬೇರೆ ಇತಿಹಾಸ ತೋರಿಸಲಾಗುತ್ತಿದೆ. ಬಸವಣ್ಣ, ಶಿವಾಜಿ, ಸಂತ ತುಕಾರಾಮ ಸೇರಿದಂತೆ ಮಹಾನ್ ಪುರುಷರ ಇತಿಹಾಸವನ್ನು ತಿರುಚಿ ತೋರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಬಸವಣ್ಣ ಕಾಲದಲ್ಲಿ ಸಾಕಷ್ಟು ಹತ್ಯೆಗಳು ನಡೆದವು. ಅದನ್ನು ಮುಸ್ಲಿಮರು ಮಾಡಿದರಾ? ಒಂದು ಲಕ್ಷ ಜೈನರ ಹತ್ಯೆಗಳಾಗಿವೆ ಎಂದು ಜೈನ್ ಸ್ವಾಮೀಜಿ ಹೇಳಿದ್ದಾರೆ. ಜೈನರ ಹತ್ಯೆಯನ್ನು ಆದಿಲ್ ಶಾ ಮಾಡಿದರಾ? ಈ ಎಲ್ಲದರ ಕುರಿತು ಚರ್ಚೆ ಆಗಬೇಕಿದೆ ಎಂದು ಜಾರಕಿಹೊಳಿ ಹೇಳಿದರು.


A B Dharwadkar
the authorA B Dharwadkar

Leave a Reply