This is the title of the web page

ನಾಳೆ ಕರ್ನಾಟಕ ಬಂದ್ ಇಲ್ಲ

ಬೆಂಗಳೂರು, 30- ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಿವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ದಿ. 31 ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ನಾಳಿನ ಬಂದ್ ಕೈಬಿಡುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಕನ್ನಡ ಮುಖಂಡರು ನಾಳಿನ ಬಂದ್ ಆಚರಣೆಯನ್ನು ಹಿಂಪಡೆದಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ನಾಳಿನ ಬಂದ್ ವಾಪಸ್ ಪಡೆಯಲು ವಾಟಾಳ ನಾಗರಾಜ ಮತ್ತು ಸಾ. ರಾ. ಗೋವಿಂದ ಸ್ಪಂದಿಸಿದ್ದು, ಅವರಿಗೆ ಧನ್ಯವಾದಗಳು ಎಂದರು.

ವಾಟಾಳ ನಾಗರಾಜ ಅವರು ಮಾತನಾಡಿ, ಮುಖ್ಯಮಂತ್ರಿ ಅವರ ಮನವಿ ಮೇರೆಗೆ ನಾವೆಲ್ಲಾ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಹೊಸ ವರ್ಷಕ್ಕೆ ತೊಂದರೆಯಾಗಲಿದೆ. ಅದು ಸರಿಯಿಲ್ಲ ಎಂಬುದಾಗಿ ನಿರ್ಧಾರ ತೆಗೆದುಕೊಂಡಿದ್ದು, ನಾಳಿನ ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದರು.

ಮುಂದಿನ ಬಂದ್ ದಿನಾಂಕ ಕುರಿತು ಇನ್ನೂ ಎರಡು ಮೂರು ದಿನಗಳಲ್ಲಿ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಾಟಾಳ ತಿಳಿಸಿದರು.

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

You might also like
Leave a comment