ಬೆಳಗಾವಿ, 6: ಬೆಳಗಾವಿಯಲ್ಲಿ ಮುಖ್ಯ ಕಚೇರಿ ಹೊಂದಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಸಿ.ಎಂ. ತ್ಯಾಗರಾಜ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ ಗೆಹ್ಲೋಟ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯವರಾದ ತ್ಯಾಗರಾಜ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಡೀನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈಗ ಇದೇ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ನೇಮಕಗೊಂಡಿದ್ದಾರೆ.
ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಅಧ್ಯಾಪನ ವೃತ್ತಿ ಆರಂಭಿಸಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೊದಲ ಪ್ರಾಧ್ಯಾಪಕರಾಗಿ ನೇಮಕಗೊಂಡು ವ್ಯವಹಾರ ನಿರ್ವಹಣಾ ಶಾಸ್ತ್ರದಲ್ಲಿ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಈ ಮಧ್ಯೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿ ಮತ್ತು ಚನ್ನಮ್ಮ ವಿವಿಯಲ್ಲಿ ಮೌಲ್ಯಮಾಪನ ಕುಲಸಚಿವರಾಗಿ, ಶಿವಮೊಗ್ಗ ಕುವೆಂಪು ವಿವಿ ಮೌಲ್ಯಮಾಪನ ಕುಲಸಚಿವರಾಗಿ ಅವರು ಸೇವೆ ಸಲ್ಲಿಸಿದ್ದಾರೆ.