This is the title of the web page

ಕೋವಿಡ್ ತಡೆಗೆ ರಾಜ್ಯದಲ್ಲಿ ಬಿಗಿ ಕ್ರಮ; ವೀಕೆಂಡ್ ಕರ್ಫ್ಯೂ

ಬೆಂಗಳೂರು, 4- ರಾಜ್ಯದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಿದೆ.

ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ ಮತ್ತು ಆರ್ ಅಶೋಕ ಅವರು ಹಲವು ತಜ್ಞರ ಜೊತೆ ನಡೆಸಿದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಸಚಿವರು ವಿವರಣೆ ನೀಡಿದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಣಯ ಕೈಗೊಂಡ ಬಳಿಕ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ ಬೆಂಗಳೂರಿನಲ್ಲಿ ಗುರುವಾರದಿಂದ ಜಾರಿಗೆ ಬರುವಂತೆ 1ರಿಂದ 9ನೇ ತರಗತಿವರೆಗೆ ಶಾಲೆಗಳಿಗೆ ರಜೆ ನೀಡಲು ಆದೇಶ ಹೊರಡಿಸಿದ್ದು, 10 ಮತ್ತು 12ನೇ ತರಗತಿಗಳು ಮಾತ್ರ ತೆರೆದಿರಲು ನಿರ್ಧರಿಸಲಾಗಿದೆ. ಆನ್ ಲೈನ್ ತರಗತಿಗಳಲ್ಲಿ ಶೈಕ್ಷಣಿಕ ಚಟುವಟಿಕೆ ಮುಂದುವರೆಯಲಿದೆ.

ಕೋವಿಡ್ ಕಡಿವಾಣಕ್ಕೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರಕಾರ ಆದೇಶ ನೀಡಿದ್ದು ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜನವರಿ 17 ರವರೆಗೆ ಜಾರಿಯಲ್ಲಿರಲಿದೆ.

ಸರ್ಕಾರಿ ಕಚೇರಿ, ಮಾಲ್ ಗಳಲ್ಲಿ ಭಾರತ ಸರ್ಕಾರದ ಮಾರ್ಗಸೂಚಿ ಪಾಲಿಸಲು ನಿರ್ಧರಿಸಲಾಗಿದೆ. ದೇವಸ್ಥಾನ, ಮಾಲ್, ಜಿಮ್, ಸ್ವಿಮ್ಮಿಂಗ್ ಫೂಲ್, ಚಿತ್ರಮಂದಿರ, ಪಬ್, ಬಾರ್ ಎಲ್ಲಾ ಸಾರ್ವಜನಿಕ ಸ್ಥಳಗಲ್ಲಿ ಶೇ.50ರ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಹೊರಾಂಗಣಕ್ಕೆ 200 ಜನ, ಒಳಾಂಗಣದಲ್ಲಿ 100 ಜನರಿಗೆ ಮಿತಿ, ಹೇರಲಾಗಿದ್ದು ಕೋವಿಡ್ ಎರಡು ಡೋಸ್ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಜಾತ್ರೆ, ಪ್ರತಿಭಟನೆ, ಪಾದಯಾತ್ರೆ ನಡೆಸಲು ಅವಕಾಶವಿಲ್ಲ . ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

You might also like
Leave a comment