ಹುಬ್ಬಳ್ಳಿ: ಟಿಪ್ಪು ಜಯಂತಿ ಆಚರಣೆಗೆ ಹು-ಧಾ ಮಹಾನಗರ ಪಾಲಿಕೆ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಶಸ್ವಿಯಾಗಿ ಟಿಪ್ಪು ಜಯಂತಿ ಮಾಡಲಾಗಿದೆ.
ಎಐಎಂಐಎಂ ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಟಿಪ್ಪು ಜಯಂತಿ ಆಚರಿಸಲಾಗಿದೆ. ಎಐಎಂಐಎಂ ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಟಿಪ್ಪು ಸುಲ್ತಾನ ಪರ ಘೋಷಣೆ ಕೂಗಿ ಟಿಪ್ಪು ಜಯಂತಿ ಆಚರಿಸಿದರು.
ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆ ಹಲವು ಷರತ್ತುಗಳ ವಿಧಿಸಿ ಆಚರಣೆಗೆ ಅನುಮತಿ ನೀಡಿತ್ತು. 10 ಸಾವಿರ ರೂ. ಪಾವತಿಸಬೇಕು, ಟಿಪ್ಪು ಸುಲ್ತಾನ್ ಫೋಟೋ ಬಿಟ್ಟು ಬೇರೆ ಫೋಟೋ ಹಾಕದಂತೆ ಷರತ್ತು ಹಾಕಿತ್ತು.
ಅದರಂತೆಯೇ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ನೆರವೇರಿದೆ. ಕಾರ್ಯಕ್ರಮದಲ್ಲಿ ಅಂಜುಮನ್ ಕಮೀಟಿ ಸದಸ್ಯರು, ಮುಸ್ಲಿಂ ಬಾಂಧವರು ಸೇರಿದಂತೆ ಹಲವರು ಭಾಗಿಯಾಗಿದ್ದು ಟಿಪ್ಪು ಸುಲ್ತಾನ ಪರ ಜೈಘೋಷ ಕೂಗಿ ಸಂಭ್ರಮಿಸಿದರು.