This is the title of the web page

ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಪ್ರವಾಸಿಗರು ನಾಪತ್ತೆ

ಭಟ್ಕಳ, 10- ತಾಲೂಕಿನ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ ೧೨ ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿತ್ತು. ಅವರಲ್ಲಿ ಅಬ್ರಾರ ಶೇಖ್ (೨೧ ವರ್ಷ) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್. (೨೩ ವರ್ಷ) ಎಂಬ ಯುವಕ ಸಮುದ್ರ ಪಾಲಾಗಿದ್ದಾನೆ.

ಶ್ರೀನಿವಾಸ‌ಪುರದ ೧೨ ಯುವಕರು ಗುರುವಾರ ಸಂಜೆ ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿದ್ದಂತೆ ದೊಡ್ಡ ‌ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ ಶೇಖ ಎಂಬಾತ ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ.

ಅದೇ ರೀತಿ ಆಗೊಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ ಮತ್ತು ಆತನ ಚಿಕ್ಕಪ್ಪ ಅಲೆಗಳಲ್ಲಿ ಮುಳುಗಲು ಆರಂಭಿಸಿದರು. ಸ್ಥಳೀಯ ಮೀನುಗಾರರು ಸುಶಾಂತನ ಚಿಕ್ಕಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾದರಾದರೂ ಸುಶಾಂತ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.

ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಯುವಕರಿಗಾಗಿ ಶೋಧ ಕಾರ‍್ಯ ನಡೆಯುತ್ತಿದೆ ಎಂದು ಮುರುಡೇಶ್ವರ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You might also like
Leave a comment