ದೇವಸ್ಥಾನಕ್ಕೆ ಹೋಗಿ ಬರುವಾಗ ಬೈಕ್ ಅಪಘಾತ; ಇಬ್ಬರ ಸಾವು

A B Dharwadkar
ದೇವಸ್ಥಾನಕ್ಕೆ ಹೋಗಿ ಬರುವಾಗ ಬೈಕ್ ಅಪಘಾತ; ಇಬ್ಬರ ಸಾವು

ಧಾರವಾಡ, ೫- ದೇವರ ದರ್ಶನಕ್ಕೆ ಹೋಗಿದ್ದ ಇಬ್ಬರು ಯುವಕರ ಭೀಕರ ಅಪಘಾತದಲ್ಲಿ ದಾರುಣವಾಗಿ ಸಾವನಪ್ಪಿರುವ ಘಟನೆ ಧಾರವಾಡದ ಬೇಲೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಧಾರವಾಡ ತಾಲೂಕಿನ ಕೋಟೂರ ಗ್ರಾಮದ ನಾಗರಾಜ ಪರಕಳ್ಳಿ ಮತ್ತು ಗಂಗಾಧರ ಹೊಸವಾಳ ಸಾವಿಗೀಡಾದವರು. ಬೈಕಿನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ದುರ್ಘಟನೆ ನಡೆದಿದ್ದು, ಆಯತಪ್ಪಿ ಬಿದ್ದು ಸಾವಿಗೀಡಾದರೋ ಅಥವಾ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೋ ಎಂಬ ಮಾಹಿತಿ ಇನ್ನೂ ತಿಳಿದು ಬರಬೇಕಾಗಿದೆ.

ನರೇಂದ್ರ ಗ್ರಾಮದ ಬಳಿಯಿರುವ ಗುಡ್ಡದ ಬಸವಣ್ಣ ದೇವರ ದರ್ಶನಕ್ಕೆ ಇವರು ತೆರಳಿದ್ದರು. ತಡ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಮೂಲಕ ತಮ್ಮ ಗ್ರಾಮಕ್ಕೆ ಮರಳುತ್ತಿರುವಾಗ ಬೇಲೂರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ತೆರಳಿ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗರಗ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.