ಬಳ್ಳಾರಿ: ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಇಬ್ಬರು ರೋಗಿಗಳು ಸಾವನ್ನಪ್ಪಿದ್ದ ಘಟನೆ ವಿಜಯನಗರ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಇಲ್ಲಿ ವೆಂಟಿಲೇಟರ್ ಕಾರ್ಯ ಸ್ಥಗಿತಗೊಂಡಿದ್ದು, ಪರಿಣಾಮ ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಐಸಿಯುನಲ್ಲೇ ರೋಗಿಗಳು ಸಾವನ್ನಪ್ಪಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಕುರಿತು ವಿಮ್ಸ್ ಆಡಳಿತ ಮಂಡಳಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ಒಂದು ವೇಳೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದರೆ ಎಲ್ಲಾ ರೋಗಿಗಳಿಗೂ ತೊಂದರೆ ಆಗುತ್ತಿತ್ತು ಎಂದು ವೈದ್ಯರು ಹೇಳುತ್ತಿದ್ದಾರೆ.
ಇನ್ನು, ವಿಮ್ಸ್ ಆಸ್ಪತ್ರೆಯಲ್ಲಿ 10 ರೋಗಿಗಳಿಗೆ ವೆಂಟಿಲೇಟರ್ ಹಾಕಲಾಗಿತ್ತು. ಸಾವನ್ನಪ್ಪಿರುವ ಇಬ್ಬರ ಪೈಕಿ ಒಬ್ಬ ರೋಗಿ ಹಾವು ಕಡಿತದಿಂದ ಗಂಭೀರ ಸ್ಥಿತಿಗೆ ತಲುಪ್ಪಿದ್ದರೆ, ಮತ್ತೋರ್ವ ಕಿಡ್ನಿ ವೈಫಲ್ಯದಿಂದ ಆಸ್ಪತ್ರೆ ಸೇರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.