ಕೊಪ್ಪಳ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.
ಹನುಮೇಶ (32), ರಮೇಶ ಮಾಲಿಗೌಡ್ರು (32) ಮೃತ ಯುವಕರು. ಮೃತರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಬೈಕ್ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.