ಬೆಳಗಾವಿ: ಇಲ್ಲಿಗೆ ಸಮೀಪದ ಶಿಂದೊಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಕೊಲೆ ಮಾಡಲಾಗಿದೆ. ಬಸವರಾಜ(23) ಮತ್ತು ಗಿರೀಶ(34) ಎಂಬವರು ಹತ್ಯೆಯಾದವರು.
ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಮೈದಾನಕ್ಕೆ ವಾಹನ ನುಗ್ಗಿಸಿದ್ದಾನೆ. ಮೈದಾನಕ್ಕೆ ವಾಹನ ನುಗ್ಗಿಸಿದ್ದರಿಂದ ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ವಾಹನದಿಂದ ಕೆಳಗಿಳಿದು ಇಬ್ಬರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಇಬ್ಬರ ಮೃತದೇಹಗಳನ್ನು ಬೆಳಗಾವಿಯ ಬಿಮ್ಸ ಆಸ್ಪತ್ರೆಗೆ ರವಾನೆ ಮಾಡಿ, ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಸ್ಪತ್ರೆ ಬಳಿ ಕೆ.ಎಸ್.ಆರ್.ಪಿ. ತುಕಡಿ ನಿಯೋಜಿಸಲಾಗಿತ್ತು.