This is the title of the web page

ಯುಗಾದಿ: ಧಾರ್ಮಿಕ ದಿನ ಆಚರಣೆಗೆ ಚಾಲನೆ

 

ನಿಪ್ಪಾಣಿ, ಏ.2 : ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಸರಕಾರ ಘೋಷಿಸಿದ್ದು, ಪ್ರಥಮ ಧಾರ್ಮಿಕ ದಿನದ ರಾಜ್ಯ ಮಟ್ಟದ ಕಾರ್ಯಕ್ರಮ ನಿಪ್ಪಾಣಿಯ ಶ್ರೀ ವಿರೂಪಾಕ್ಷ ಲಿಂಗ ಸಮಾಧಿ ಮಠದಲ್ಲಿ ಶನಿವಾರ ನಡೆಯಿತು.

ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಸಾಂಪ್ರದಾಯಿಕ ಪೂಜೆ-ಪುನಸ್ಕಾರ ಮೂಲಕ ಯುಗಾದಿಯಂದು ಧಾರ್ಮಿಕ ದಿನವನ್ನು ಆಚರಿಸಿದರು.

ಗೋ ಪೂಜೆ, ಲಕ್ಷ್ಮೀ ಪೂಜೆ, ಮಾಡಿ ನೇಗಿಲು ಹೊಡೆದ ಜೊಲ್ಲೆ ದಂಪತಿಗಳು ನಂತರ ನೇಗಿಲು ಹಿಡಿದು ಬಿತ್ತನೆ ಮಾಡುವ ಮೂಲಕ ಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ಯುಗಾದಿ ಹಬ್ಬವನ್ನು ಇನ್ನು ಮುಂದೆ ಪ್ರತಿವರ್ಷ ಸರಕಾರದ ವತಿಯಿಂದ ಧಾರ್ಮಿಕ ದಿನಾಚರಣೆಯ‌ನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಸಮಾಧಿ ಮಠದಲ್ಲಿ ಸರ್ಕಾರದಿಂದಲೇ ಕಾರ್ಯಕ್ರಮ ಆಯೋಜನೆ ಮಾಡಿ ಪ್ರಥಮಬಾರಿಗೆ ಧಾರ್ಮಿಕ ದಿನಾಚರಣೆಯನ್ನು ಆಚರಣೆ ಆರಂಭಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಸಚಿವೆ ಶಶಿಕಲಾ‌ ಜೊಲ್ಲೆ  ವಚನ ಗಾಯನ ಹಾಗೂ ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ‌ ಹಾಡು ಹಾಡುವ ಮೂಲಕ ಹಿಂದೂ‌ ಸಂಪ್ರದಾಯದ ಹೊಸ ವರ್ಷಾಚರಣೆಯ ಮಹತ್ವವನ್ನು ತಿಳಿಸಿದರು.

ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡರ ಹಾಗೂ ಅನೇಕ ಧರ್ಮಗುರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You might also like
Leave a comment